ರಾಮಚಂದ್ರ ಬೈಕಂಪಾಡಿ ನಿಧನಕ್ಕೆ , ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಸಂತಾಪ

0
13

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ರಾಮಚಂದ್ರ ಬೈಕಂಪಾಡಿ ಅವರ ನಿಧನಕ್ಕೆ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮಚಂದ್ರ ಬೈಕಂಪಾಡಿ ಅವರು 2005 ರಿಂದ 2008 ಅವಧಿಯಲ್ಲಿ ತುಳು ಅಕಾಡೆಮಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಸಾಹಿತ್ಯ, ರಂಗಭೂಮಿ, ಸಿನಿಮಾ ಹಾಗೂ ತುಳು ಪರ ಚಟುವಟಿಕೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರಾಗಿದ್ದರು.

LEAVE A REPLY

Please enter your comment!
Please enter your name here