ಮೇ.09ರಂದು ತುಳು ನಾಟಕ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

0
9

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಉರ್ವಾ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಹತ್ತು ದಿನಗಳ ತುಳು ನಾಟಕ ತರಬೇತಿ ಕಾರ್ಯಾಗಾರದ ಉದ್ಘಾಟನೆ ಮೇ 9 ರಂದು ಶನಿವಾರ ನಡೆಯಲಿದೆ.

ನಾಟಕ ಕಾರ್ಯಾಗಾರವನ್ನು ಬೆಳಿಗ್ಗೆ 11 ಗಂಟೆಗೆ ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಉದ್ಘಾಟಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸುವರು. ಎಸ್ .ಸಿ .ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಯು.ಕೆ. ಖಾಲಿದ್, ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಪಿ ಚೌಹಾಣ್ , ಕನ್ನಡ ವಿಭಾಗದ ಮುಖ್ಯಸ್ಥರಾದ ಸುಚಿತ್ರಾ ಪಿ.ಶೆಟ್ಟಿ ಹಾಗೂ ನಾಟಕ ಕಾರ್ಯಾಗಾರದ ನಿರ್ದೇಶಕ ಯೋಗೀಶ್ ಶೆಟ್ಟಿ , ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು .

LEAVE A REPLY

Please enter your comment!
Please enter your name here