ಕಡಬ: ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೇತ್ರಾವತಿ ತುಳುಕೂಟ ರಾಮಕುಂಜ ಇವರ ಸಹಭಾಗಿತ್ವದಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ತುಳು ಭಾಷೆ-ಸಂಸ್ಕೃತಿ ಕಾರ್ಯಾಗಾರ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಕಡಬದ ನೂಜಿಬೈಲ್ ತೆಗ್‌ರ್ ತುಳುಕೂಟದ ಸದಸ್ಯ ಉಮೇಶ್ ಶೆಟ್ಟಿ ಸಾಯಿರಾಂ ಮಾತನಾಡಿದರು. ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ, ರಾಮಕುಂಜ ನೇತ್ರಾವತಿ ತುಳುಕೂಟದ ಅಧ್ಯಕ್ಷ ಕೆ. ಸೇಸಪ್ಪ ರೈ ಕಾರ್ಯಾಗಾರ ಉದ್ಘಾಟಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಕಿಶೋರ್, ಹರೀಶ್ ಬಾರಿಂಜ ಉಪಸ್ಥಿತರಿದ್ದರು. ಸರಿತಾ ಜನಾರ್ದನ ಸ್ವಾಗತಿಸಿದರು.