Friday, March 21, 2025
Homeತುಳು ಭಾಷೆತುಳು ಅಧಿಕೃತ ಭಾಷೆ : ಶಾಸಕರುಗಳಿಗೆ ತುಳು ಅಕಾಡೆಮಿ ಅಧ್ಯಕ್ಷರ ಒತ್ತಾಯ

ತುಳು ಅಧಿಕೃತ ಭಾಷೆ : ಶಾಸಕರುಗಳಿಗೆ ತುಳು ಅಕಾಡೆಮಿ ಅಧ್ಯಕ್ಷರ ಒತ್ತಾಯ

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕರಾವಳಿಯ ಶಾಸಕರು ಪ್ರಸಕ್ತ ವಿಧಾನ ಮಂಡಲದ ಅಧಿವೇಶನದಲ್ಲಿ ವಿಚಾರ ಪ್ರಸಾಪ ಮಾಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ.

         ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ತುಳು ಭಾಷಿಕರ ಬೇಡಿಕೆಗೆ ಕಳೆದ ಅಧಿವೇಶನದಲ್ಲಿ ಸರಕಾರ ಪೂರಕವಾಗಿ ಸ್ಪಂದಿಸಿರುತ್ತದೆ. ಕಳೆದ ವಿಧಾನಸೌಧ ಅಧಿವೇಶನದಲ್ಲಿ ಈ ವಿಚಾರಕ್ಕೆ ಸಂಬAಧಿಸಿದAತೆ ನಡೆದ ಚರ್ಚೆಯ ವೇಳೆ ಒಂದಕ್ಕಿಂತ ಹೆಚ್ಚು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಹೊಂದಿರುವ ಹೊರ ರಾಜ್ಯಗಳಲ್ಲಿ ಯಾವ ರೀತಿ ಅನುಷ್ಠಾನ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸಿಕೊಂಡು ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವುದಾಗಿ ಸರಕಾರ ಭರವಸೆ ನೀಡಿತ್ತು.

        ಈಗಾಗಲೇ ವಿವಿಧ ರಾಜ್ಯಗಳಿಂದ ಮಾಹಿತಿ ರಾಜ್ಯ ಸರಕಾರಕ್ಕೆ ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಸಕ್ತ ನಡೆಯುವ ಅಧಿವೇಶನದಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸುವ ನಿಟ್ಟಿನಲ್ಲಿ ಎಲ್ಲಾ ಶಾಸಕರು, ವಿಧಾನ ಮಂಡಲದ ಸದಸ್ಯರು ವಿಷಯ ಪ್ರಸ್ತಾಪಿಸಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ರವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಪತ್ರ ಬರೆದು ಆಗ್ರಹ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular