ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ನೇಮಕಗೊಂಡ ದಿನಕರ್ ಹೇರೂರು ರವರನ್ನು ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ವತಿಯಿಂದ ಹೂ ಗುಚ್ಛ ನೀಡಿ ಅಭಿನಂದಿಸಿ ಬಳಿಕ ನೂತನ ಅಧ್ಯಕ್ಷರಿಗೆ ಉಡುಪಿ ನಗರದ ಸಮಸ್ಯೆ ಬಗ್ಗೆ ವಿವರಿಸುತ್ತಾ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕ ನಿವೇಶನ ವಿನ್ಯಾಸ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೀಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆಂಟ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ, ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.
ಏಕ ನಿವೇಶನ ಪರವಾನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ಮನವಿ
RELATED ARTICLES