ಪ್ರದೀಪ್ ಪೂಜಾರಿ ಮನೆಗೆ ತುಳುನಾಡ ಪರಿಷತ್ ಭೇಟಿ – ಕುಟುಂಬಕ್ಕೆ ಸಾಂತ್ವನ

0
12

ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಪ್ರಕರಣದ ವಿಷಯ ತಿಳಿದ ಬಳಿಕ ತುಳುನಾಡ ಪರಿಷತ್‌ನ ಪದಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ತಾಯಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ದುಃಖದ ಸಂದರ್ಭದಲ್ಲಿ ಕುಟುಂಬದ ನೋವಿನಲ್ಲಿ ಭಾಗಿಯಾಗಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ತುಳುನಾಡ ಪರಿಷತ್‌ನ ಸ್ಥಾಪಕ ಅಧ್ಯಕ್ಷ ರೋಹಿತ್ ಕರಂಬಳ್ಳಿ, ಜಿಲ್ಲಾಧ್ಯಕ್ಷ ಜಯರಾಮ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್, ಉಪಾಧ್ಯಕ್ಷರಾದ ಮೋಹನ್ ಕಲ್ಮಾಡಿ, ಶೇಖರ್ ಕೊಟ್ಯಾನ್, ಬದ್ರುಲ್ಲಾ, ಮಹಿಳಾ ಘಟಕದ ಪ್ರೀತಿ ಕಲ್ಯಾಣಪುರ, ಆಶಾ ಚಂದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು.