ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನೇಲ್ಯಪಲ್ಕೆ ನಿವಾಸಿ ಜಿತೇಂದ್ರರವರು ವಯರಿಂಗ್ ಕೆಲಸ ಮಾಡುತ್ತಿರುವಾಗ ಬಿದ್ದು ತಲೆ ಮತ್ತು ಕಾಲಿಗೆ ತೀವ್ರವಾದ ಪೆಟ್ಟಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುತ್ತಾರೆ. ಮುಂದಿನ ವೈದ್ಯಕೀಯ ವೆಚ್ಚಕ್ಕಾಗಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ ಧನ ಸಹಾಯವನ್ನು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಇಲ್ಲಿ ಪ್ರಧಾನ ಅರ್ಚಕರಾದ ಸುಧೀರ್ ಭಟ್ ಇವರ ಸಮ್ಮುಖದಲ್ಲಿ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಶಿವಪ್ಪ ಪೂಜಾರಿ ಹಟದಡ್ಕ, ಅನಂದ ಪೂಜಾರಿ ಅಲ್ಲಂಗಾರು ಮತ್ತು ಟ್ರಸ್ಟ್ ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

