
ಕಾಪು : ಅಸೋಸಿಯೇಟೆಡ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ (TV9) ಮುಖ್ಯ ನಿರ್ಮಾಪಕ ರಂಗನಾಥ ಭಾರದ್ವಾಜ್ ಅವರು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಭಕ್ತರ ಧಾರ್ಮಿಕ ಸೇವಾ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡರು.
ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ನವದುರ್ಗಾ ಲೇಖನ ಯಜ್ಞದ ಬಗ್ಗೆ ಮಾಹಿತಿಯನ್ನು ನೀಡಿದರು, ರಂಗನಾಥ್ ಭಾರದ್ವಾಜ್ ಅವರ ಪತ್ನಿ ಲೇಖನವನ್ನು ಪಡೆದು ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಲಾಯಿತು
