ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಇಪ್ಪತ್ತಾರನೇ ದಿನದ ಪ್ರದಕ್ಷಿಣೆಗೆ ಜುಲೈ 09 ಮಂಗಳವಾರ ಸೌತಡ್ಕ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯ ತೋಡ್ತಿಲ್ಲಾಯ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಸತೀಶ್ ದೇವಾಡಿಗ, ನಿಲೇಶ್, ಶಶಾಂಕ್, ಆರ್ಯನ್ ಉಪಸ್ಥಿತರಿದ್ದರು.