ಹೆಬ್ರಿ : ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಜಾನುವಾರು ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಮೂಡು ತೆರಾರು ಗ್ರಾಮದ ಗಂಜಿಮಠ ಬಸ್ ನಿಲ್ದಾಣದ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಉಡುಪಿಯ ಕೆಮ್ಮಣ್ಣು ಹೂಡೆ ನಿವಾಸಿಗಳಾದ ವಸಿಂ ಅಕ್ರಮ್(32) ಹಾಗೂ ಸೈಫನ್ ಮುಕ್ತಸರ ಎಂದು ತಿಳಿದು ಬಂದಿದೆ.
ಈ ಕುರಿತು ಇವರಿಬ್ಬರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಮಂಗಳೂರಿನ ಮೂಡು ತೆರಾರು ಗ್ರಾಮದ ಗಂಜಿಮಠ ಬಸ್ ನಿಲ್ದಾಣದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

