ಹುಬ್ಬಳ್ಳಿ: ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಮೃತಪಟ್ಟ ಮಾಲಾಧಾರಿಗಳಾಗಿದ್ದಾರೆ.
ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿತ್ತು. ಗ್ಯಾಸ್ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ಅವರನ್ನೆಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.