ಬಸ್ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ

0
80

ದಾವಣಗೆರೆ : ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಸಮೀಪ ಅಪಘಾತ ನಡೆದಿದೆ. ಮಂಜುನಾಥ್ ಕೋಡಿರಂಗವ್ವನಹಳ್ಳಿ(25), ಗಣೇಶ್ ಗುಂಡಿಮಡು(27) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಚಿತ್ರದುರ್ಗ ತಾಲೂಕಿನ ಭರಮಸಾಗರದ ನಿವಾಸಿಗಳಾಗಿದ್ದಾರೆ.

ಚನ್ನಗಿರಿಯಿಂದ ಚಿತ್ರದುರ್ಗದ ಕಡೆಗೆ ಬೈಕ್ ಸವಾರರು ತೆರಳುತ್ತಿದ್ದರು. ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here