ಮಂಗಳೂರು ವಿಶ್ವವಿದ್ಯಾನಿಲಯದ 2024–25 ಪದವಿ ಪರೀಕ್ಷೆಯಲ್ಲಿ ಎಸ್‌.ಸಿ‌.ಎಸ್‌ ಪ್ರಥಮ ದರ್ಜೆ ಕಾಲೇಜಿಗೆ ಎರಡು ಪ್ರಥಮ ರಾಂಕ್

0
8

Vrinda G.Rao

ಮಂಗಳೂರಿನ ಎಸ್‌.ಸಿ‌.ಎಸ್‌ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ವೃಂದಾ ಜಿ. ರಾವ್ ಹಾಗೂ ಪೂರ್ಣಾ ಸಿ. ಅವರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2024–25ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ವೃಂದಾ ಜಿ. ರಾವ್ ಅವರು ತಮ್ಮ ವಿಭಾಗದಲ್ಲಿ ಪ್ರಥಮ ರಾಂಕ್ ಗಳಿಸಿದ್ದು, ಬಿ.ಎಸ್ಸಿ ಅನಿಮೇಶನ್ ಮತ್ತು ದೃಶ್ಯ ಪರಿಣಾಮಗಳು ವಿಭಾಗದ ವಿದ್ಯಾರ್ಥಿನಿ ಪೂರ್ಣಾ ಸಿ. ಅವರು ಸಹ ಪ್ರಥಮ ರಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Poorna.C

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆಗಳನ್ನಾಗಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here