ಕೌಲಾಲಾಂಪುರ: ಮಲೇಷ್ಯಾಕ್ಕೆ ಸೇರಿದ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪತನವಾಗಿ ಹತ್ತು ಮಂದಿ ಸಾವಿಗೀಡಾಗಿದ್ದಾರೆ. ಪೆರಾಕ್ ನ ಲುಮುಟ್ ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಇಂದು ನಡೆದ ಈ ಅಪಘಾತದಲ್ಲಿ ಹತ್ತು ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತದೇಹಗಳನ್ನು ಹೆಲಿಕಾಪ್ಟರ್ ಗಳಿಂದ ಹೊರ ತೆಗೆಯುವ ಕಾರ್ಯಾಚರಣೆ ನಡೆದಿದೆ.