Saturday, September 14, 2024
Homeರಾಜಕೀಯಉಡುಪಿ: ಏ.3 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ....

ಉಡುಪಿ: ಏ.3 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ. ರವಿ, ಸುನಿಲ್ ಕುಮಾರ್ ಭಾಗಿ

ಏ.3ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ.

ಮಾಜಿ ಕೇoದ್ರ ಸಚಿವ, ಹಿಂದೂ ಫೈರ್ ಬ್ರಾoಡ್ ಬಸವನಗೌಡ ಪಾಟೀಲ್ ಯತ್ನಾಳ್ ದಿಕ್ಸೂಚಿ ಭಾಷಣ ಮಾಡಲಿರುವರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಸಹಿತ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇoದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ಸಮಿತಿ ಸದಸ್ಯರು, ಕಾರ್ಯಕಾರಿಣಿ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular