ಉಡುಪಿ : ಕೊಡವೂರು ಪಾಳೇಕಟ್ಟೆ ಅಂಗನವಾಡಿ ಸಮೀಪ ಶನಿವಾರ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ಧರೆಗೆ ಉರುಳಿದ ಘಟನೆ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರಸಭೆಯ ವತಿಯಿಂದ ಹಾಗೂ ವಿಜಯ ಕೊಡವೂರು ಅವರ ನೇತೃತ್ವದಲ್ಲಿ ಪಾಳೇಕಟ್ಟೆಯ ನಾಗರಿಕರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಇದೇ ವೇಳೆ ಹಾನಿಗೊಳಗಾದ ವಿದ್ಯುತ್ ಕಂಬಗಳನ್ನು ಮರುಸ್ಥಾಪಿಸುವ ಕುರಿತು ಮೆಸ್ಕಾಂ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಲಾಗಿದ್ದು, ಇಂದೇ ದುರಸ್ತಿ ಕಾರ್ಯ ಪೂರ್ಣಗೊಳಿಸಿ ವಿದ್ಯುತ್ ಸರಬರಾಜು ಪುನಃಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

