ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿ ನಾಪತ್ತೆ

0
119

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ. ಈಕೆ ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ನ.24ರಂದು ಮನೆಯಿಂದ ಹೊರಗೆ ಹೋದವಳು ವಾಪಾಸು ಬಾರದೇ ನಾಪತ್ತೆಯಾಗಿದ್ದಾಳೆ.

4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here