ಉಡುಪಿ: ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ರಸ್ತೆ ಡಿವೈಡರ್ ಗೆ ಡಿಕ್ಕಿಯೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಇಂದು ಶನಿವಾರ ನಡೆದಿದೆ.
ಕೋಟೇಶ್ವದಿಂದ ರೋಗಿಯನ್ನು ಅಂಬ್ಯುಲೆನ್ಸ್ ನಲ್ಲಿ ಮಣಿಪಾಲದ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿಯೊಡೆದು ಡಿವೈಡರ್‌ಗೆ ವಾಹನ ಅಪ್ಪಳಿಸಿತು ಎನ್ನಲಾಗಿದೆ. ಅಪಘಾತದ ಬಳಿಕ ರೋಗಿಯನ್ನು ಮತ್ತೊಂದು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.