ಉಡುಪಿ : ಅಸ್ಸಾಂ ಮೂಲದ ಯುವಕನೋರ್ವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಾ.18ರಂದು ಸಂಜೆ ವೇಳೆ ಉಡುಪಿ ಜಿಲ್ಲೆಯ ಬೈಂದೂರಿನ ನಾವುಂದ ಗ್ರಾಮದ ಅರೆಹೊಳೆ ಎಂಬಲ್ಲಿ ನಡೆದಿದೆ.
ಅಸ್ಸಾಂ ರಾಜ್ಯ ಪ್ರದೀಪ್ ಸರಕಾರ್(20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರದೀಪ್ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೈಂದೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ. ಈ ಘಟನೆ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.