Saturday, June 14, 2025
Homeಉಡುಪಿಉಡುಪಿ: ಕ್ರಿಕೆಟ್ ಬೆಟ್ಟಿಂಗ್ ದಂಧೆ ಆರೋಪಿಗಳ ಬಂಧನ

ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ದಂಧೆ ಆರೋಪಿಗಳ ಬಂಧನ

ಉಡುಪಿ : ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿ ಅವರಲ್ಲಿ ಸೊತ್ತುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.

ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಐಪಿಎಲ್ ಪಂದ್ಯಗಳ ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಾ, ಇತರೇ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡ ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಾ ಅವರಿಗೆ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ನ್ನು ಡೌನ್‌ಲೋಡ್ ಮಾಡಿಕೊಟ್ಟು ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು.

ಆರೋಪಿಗಳಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಉಡುಪಿ ಸೆನ್ ಸೆನ್ ಪೊಲೀಸರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular