ಉಡುಪಿ ಡಿಎಆರ್ ಎಎಸ್‌ಐ ನಾಗರಾಜ್ ಅವರಿಗೆ ಭಾರತ ಸೇವಾ ರತ್ನ ಪ್ರಶಸ್ತಿ

0
103

ಉಡುಪಿ: ಕರ್ನಾಟಕ ಪ್ರೆಸ್ ಕ್ಲಬ್ ಉತ್ತಮ ಆಡಳಿತ ಸೇವೆಗೆ ಕೊಡಮಾಡಿರುವ ಭಾರತ ಸೇವಾ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಸಹಾಯಕ ಉಪ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮೂಲತಃ ಹೆಜಮಾಡಿಯವರಾದ ನಾಗರಾಜ್ ಅವರಿಗೆ ಲಭಿಸಿದೆ.

ಅವರ ಪ್ರಾಮಾಣಿಕ, ಕರ್ತವ್ಯನಿಷ್ಠೆ ಮತ್ತು ಸಮಯ ಪರಿಪಾಲನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಬೆಂಗಳೂರು ಜ್ಞಾನಭಾರತಿ ಕಲಾ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯಾಧ್ಯಕ್ಷ ಎಸ್.ರಾಮಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು. ನೆಲಮಂಗಲ ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಬದಾಮಿ ಅನವಾಲ ಶ್ರೀ ಶ್ರದ್ಧಾನಂದ ಆಶ್ರಮದ ಡಾ. ಕೈಲಾಸಪತಿ ಮಹಾಸ್ವಾಮಿಗಳು, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ರಾಜ್ಯಾಧ್ಯಕ್ಷ ಪಿ. ಕೃಷ್ಣಗೌಡ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here