ಉಡುಪಿ ಜಿಲ್ಲೆಯ ಕಟಪಾಡಿ ತ್ರಿಶಾ ಕಾಲೇಜಿನ ವಿದ್ಯಾರ್ಥಿ ದೀಕ್ಷ್ಣ ಎನ್ ಕಲ್ಮಾಡಿ ಇವರಿಗೆ ಬೆಳಗಾವಿ ಕಸ್ತೂರಿ ಸಿರಿಗನ್ನಡ ವೇದಿಕೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ನಟನೆ, ಮೊಡಲಿಂಗ್, ಭರತನಾಟ್ಯ, ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ.