ಉಡುಪಿಯ: ಸಬಲೀಕರಣ ಯೋಜನೆಗಳ ಸವಲತ್ತು ವಿತರಣೆ

0
6

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ಯೋಜನೆಯ ಸವಲತ್ತುಗಳನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಿತರಿಸಿದರು.

ಅರ್ಹ ಫಲಾನುಭವಿಗಳಿಗೆ ಕೃತಕ ಕಾಲು, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ವಿಕಲ ಚೇತನ ವ್ಯಕ್ತಿಗಳ ವಿವಾಹ ಪ್ರೋತ್ಸಾಹ ಧನದ ಬಾಂಡ್ ಗಳನ್ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ರಾಜ್ಯ ಹಾಗೂ ಕೇಂದ್ರ ಸರಕಾರ ವಿಶೇಷ ಚೇತನ ವ್ಯಕ್ತಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ರೂಪಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ವಿಕಲ ಚೇತನರನ್ನು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವಿಶೇಷ ಸಹಕಾರ ನೀಡಲು ಆದ್ಯತೆ ವಹಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಜಯ ನಾಯ್ಕ್, ಅಂಗವಿಕಲ ಕಲ್ಯಾಣಾಧಿಕಾರಿ ಶ್ರೀಮತಿ ರತ್ನ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಆದರ್ಶ ಶೆಟ್ಟಿ ಕೆಂಜೂರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here