ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
6

ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿ ನಗರ ಮಂಡಲದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ಶೇಷಶಯನ ಸಭಾಂಗಣದಲ್ಲಿ ನಡೆಯಿತು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಯೋಗ ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಯೋಗ ಗುರು ಡಾ! ದಿನೇಶ್ ನಾಯಕ್, ಕಾರ್ಯಕ್ರಮ ಸಂಯೋಜಕ ಗಿರೀಶ್ ಅಮೀನ್, ಪ್ರಮುಖರಾದ ಸತ್ಯಾನಂದ ನಾಯಕ್, ದಿನಕರ ಬಾಬು, ಶಿಲ್ಪಾ ಜಿ. ಸುವರ್ಣ, ಶಿವಕುಮಾರ್ ಅಂಬಲಪಾಡಿ, ಶ್ರೀಕಾಂತ್ ನಾಯಕ್, ಜಗದೀಶ್ ಆಚಾರ್ಯ, ರಶ್ಮಿತಾ ಬಿ. ಶೆಟ್ಟಿ, ಸಂಧ್ಯಾ ರಮೇಶ್, ಶ್ಯಾಮಲಾ ಎಸ್. ಕುಂದರ್, ಪ್ರಥ್ವಿರಾಜ್ ಶೆಟ್ಟಿ, ವಿಜಯ ಕೊಡವೂರು, ಚಂದ್ರ ಪಂಚವಟಿ ಸಹಿತ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ನಗರಸಭಾ ಸದಸ್ಯರ ಸಹಿತ ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.

LEAVE A REPLY

Please enter your comment!
Please enter your name here