ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

0
17

ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಮಾಜಿ ಜಿಲ್ಲಾ ಸಂಚಾಲಕ, ಲಯನ್ಸ್ ದುರೀಣ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಖ್ಯಾತ ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸರಳ, ಸಜ್ಜನಿಕೆ ಹಾಗೂ ಚುರುಕಿನ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಉದಯ ಶೆಟ್ಟಿ ಇನ್ನಾ ಅವರು ಬಿಜೆಪಿ ಮುಖಂಡರಾಗಿ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಅಪಾರ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಬಿಜೆಪಿ ನಿಕಟಪೂರ್ವ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಸಹಿತ ಪಕ್ಷದ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here