Sunday, July 14, 2024
Homeತುಳುನಾಡುಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಸಮಾವೇಶ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ...

ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಸಮಾವೇಶ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಉಡುಪಿ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಸಮಾವೇಶ ಇಂದು ದಿನಾಂಕ 02-04-2024 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಶಾಸಕರು ಮಾತನಾಡಿ ಸನ್ಮಾನ ನರೇಂದ್ರ ಮೋದಿ ಜಿ ಅವರು ಪ್ರಧಾನ ಮಂತ್ರಿಗಳಾದ ಬಳಿಕ ಜಾರಿಗೆ ತಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 6000 ಸಾವಿರ ರೂಪಾಯಿ ಬರುತ್ತಿದ್ದು ಇದರಿಂದ ರೈತರಿಗೆ ಸಹಕಾರಿಯಾಗುತ್ತಿದ್ದೆ ಎಂದು ಹೇಳಿದ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಎ.ಎಸ್ ಪಾಟೀಲ್ ನಡಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಕಲ್ಮಡು, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಶಾಸಕರಾದ ರಘುಪತಿ ಭಟ್, ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಕಮಲಾಕ್ಷ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಪುಷ್ಪರಾಜ್ ಶೆಟ್ಟಿ ಶಿರೂರು ಹಾಗೂ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular