ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಮತ್ತು ತೃತೀಯ ಸ್ಥಾನ

0
7

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯು ಇತ್ತೀಚೆಗೆ ಹಾಸನದಲ್ಲಿ ಜರುಗಿತು. 14 ವಯೋಮಿತಿಯ ಬಾಲಕರ ಚೆಸ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಈ ತಂಡದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ಅಮೃತ ಭಾರತಿ ವಿದ್ಯಾಕೇಂದ್ರದ ಪ್ರದ್ಯುಮ್ನ ಮತ್ತು ವಿದ್ಯಾಲಯದ ಮೋಹಿತ್ ಭಾಗವಹಿಸಿ ದ್ವಿತೀಯ ಸ್ಥಾನದೊಂದಿಗೆ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಮುಡಿಗೇರಿಸಿಕೊಂಡಿದ್ದಾರೆ.

17 ವಯೋಮಿತಿಯ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಗೆ ತೃತೀಯ ಸ್ಥಾನ ಲಭಿಸಿದೆ. ಈ ತಂಡದಲ್ಲಿ ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾಲಯದ ವಿದ್ಯಾರ್ಥಿನಿ ಐಸಿರಿ ಎಂ ಮತ್ತು ವಿದ್ಯಾಕೇಂದ್ರದ ವಿದ್ಯಾರ್ಥಿನಿಯರಾದ ಅನನ್ಯಾ, ಹರ್ಷಿತಾ, ಹರ್ಷದಾ ತೃತೀಯ ಸ್ಥಾನದೊಂದಿಗೆ  ಪದಕ ಮತ್ತು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳನ್ನು ಮತ್ತು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಂಸ್ಥೆಯ ಮುಖ್ಯಸ್ಥರಾದ ಅರುಣ್ ಕುಮಾರ್ ಹೆಚ್ ವೈ, ಅಪರ್ಣಾ ಆಚಾರ್, ವಿದ್ಯಾಭಾರತಿ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ವಿದ್ಯಾಭಾರತಿ ಉಡುಪಿ ಜಿಲ್ಲಾ ಶಾರೀರಿಕ ಪ್ರಮುಖ್ ವಿಜಯಕುಮಾರ್ ಶೆಟ್ಟಿ ಅಭಿನಂದಿಸಿದ್ದಾರೆ.