ಉಡುಪಿ : ಜನವರಿ 22ರಂದು ‘ಕರ್ತವ್ಯ ಬೋಧ ದಿವಸ’ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ

0
18

ವರದಿ : ಮಂದಾರ ರಾಜೇಶ್ ಭಟ್

ಉಡುಪಿ : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಕೆ.ಆರ್.ಎಂ.ಎಸ್.ಎಸ್), ಉಡುಪಿ ಘಟಕ ಹಾಗೂ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಕರ್ತವ್ಯ ಬೋಧ ದಿವಸ’ ಮತ್ತು 2025ರಲ್ಲಿ ನಿವೃತ್ತರಾದ ಶಿಕ್ಷಕರಿಗೆ ಅಭಿನಂದನಾ ಸಮಾರಂಭವು ಇದೇ ಬರುವ ಗುರುವಾರ, ಜನವರಿ 22 ರಂದು ಮಧ್ಯಾಹ್ನ 3:00 ಗಂಟೆಗೆ ಕಾಲೇಜಿನ ಎ.ವಿ. ಸಭಾಂಗಣದಲ್ಲಿ (AV Hall) ನಡೆಯಲಿದೆ.


​ಮುಖ್ಯ ಅತಿಥಿಗಳು :

ಮಣಿಪಾಲದ ಎಂ.ಐ.ಟಿ (MIT) ಕಾಲೇಜಿನ ಪ್ರಾಧ್ಯಾಪಕರಾದ ಡಾ. ವಾದಿರಾಜ ಗೋಪಾಡಿ ಅವರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಗೌರವಾನ್ವಿತ ಅತಿಥಿಗಳಾಗಿ ಬೆಂಗಳೂರಿನ ಕೆ.ಆರ್.ಎಂ.ಎಸ್.ಎಸ್. ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಅವರು ಉಪಸ್ಥಿತರಿರುವರು.

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಕಾಂತ್ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

​ಕಾರ್ಯಕ್ರಮದಲ್ಲಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಡಾ. ಪ್ರಜ್ಞಾ ಮಾರ್ಪಳ್ಳಿ, ಡಾ. ಸುರೇಂದ್ರ ಶೆಟ್ಟಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here