ಉಡುಪಿ : ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಸಾವು..!

0
85

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವೃದ್ಧೆಯೊಬ್ಬರು ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಸಂಭವಿಸಿದೆ.

ಮೃತರನ್ನು ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿಯಾಗಿದ್ದ ಭಟ್ (73) ಎಂದು ಗುರುತಿಸಲಾಗಿದೆ. ಪಾಂಗಾಳ ಮತ್ತು ಕಾಪುವಿನಲ್ಲಿ ಮನೆ ಹೊಂದಿದ್ದ ಅವರು ಕಾಪುವಿನಿಂದ ಪಾಂಗಾಳಕ್ಕೆ ಆಗಮಿಸಿ ಹಾಲು ಖರೀದಿಸಿ ಮನೆಗೆ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಮಹಿಳೆಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದರು. ಅತಿಯಾದ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲಾಗಿದೆ.

ದಾರುಣ ಸಂಗತಿಯೆಂದರೆ, ಮೃತರ ಪತಿ ಕೆಲ ವರ್ಷಗಳ ಹಿಂದೆ ಉದ್ಯಾವರ ಸೇತುವೆ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಅವರು ತಮ್ಮ ಏಕೈಕ ಮಗಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here