ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಕುಂತಳನಗರ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಕನ್ವೆಂಶನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಸಭಾಭವನದಲ್ಲಿ ಇಂದು ದಿನಾಂಕ 06-11-2025 ರಂದು ಆಯೋಜಿಸಿರುವ “ಬೃಹತ್ ಉದ್ಯೋಗ ಮೇಳ” ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಈಶ್ವರ್ ಶೆಟ್ಟಿ ಮತ್ತು ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಹಾಗೂ ಉದ್ಯಮಿಗಳು ಉಪಸ್ಥಿತರಿದ್ದರು.

