ಉಡುಪಿ:: ಕರ್ನಾಟಕ ರಾಜ್ಯ ಕಿರಿಯರ ಕ್ರೀಡಾಕೂಟ ದಿನಾಂಕ 23-08-2025 ರಿಂದ ದಿನಾಂಕ 25-08-2025 ರವರೆಗೆ ಉಡುಪಿಯಲ್ಲಿ ನಡೆಯಲಿದೆ. ಈ ಕ್ರೀಡಾಕೂಟಕ್ಕೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರು, ಉಡುಪಿಯ ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಶ್ರೀ ಮಹೇಶ್ ಠಾಕೂರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ಶ್ರೀ ರಾಜವೇಲು, ಖಜಾಂಚಿ ಶ್ರೀಕಾಂತ್, ಜೊತೆ ಕಾರ್ಯದರ್ಶಿ ಉಮೇಶ್ ಹಾಗೂ ಉಡುಪಿ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ದಿನೇಶ್ ಕುಮಾರ್ ಉಪಸ್ಥಿತರಿದ್ದರು.