ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಉದಯವಾಣಿ ದಿನಪತ್ರಿಕೆಯ ಕುಂದಾಪುರ ವರದಿಗಾರ ಪ್ರಶಾಂತ ಪಾದೆ ಆಯ್ಕೆಯಾಗಿದ್ದಾರೆ.
ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

