Tuesday, December 3, 2024
Homeಉಡುಪಿಉಡುಪಿ | ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಉಡುಪಿ | ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕತ್ತು ಸೀಳಿ ಕೊಂದಿರುವ ಘಟನೆ ನಡೆದಿದೆ. ಅಲ್ಲದೆ ಘಟನೆಯ ಬಗ್ಗೆ ಸ್ವಯಂ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿರುವ ಘಟನೆಯ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಬಳಿಯ ಕೃಷ್ಣಕೃಪಾ ಬಿಲ್ಡಿಂಗ್‌ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್‌ ಶೆಟ್ಟಿ ಕೊಲೆಯಾದ ವ್ಯಕ್ತಿ.
ಮೃತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್‌ ಎಂಬಾತನೇ ಕೊಲೆ ಆರೋಪಿ. ಇಬ್ಬರೂ ಕುಡಿದು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್‌ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್‌ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES
- Advertisment -
Google search engine

Most Popular