ಉಡುಪಿ ಜಿಲ್ಲೆಯ ಹೆಬ್ರಿಯ ಮಿಥಿಲಾ ನಗರದಲ್ಲಿರುವ ಅಮೃತ ಭಾರತೀ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ನವ್ಯಶ್ರೀ ಡಿ.ಎನ್ ಅವರು 2026ರ ದ್ವಿತೀಯ ಪಿಯುಸಿ ವಾರ್ಷಿಕ ಬೋರ್ಡ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ನವ್ಯಶ್ರೀ ಅವರು ಸಂಸ್ಕೃತ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಷಯಗಳಲ್ಲಿ ತಲಾ 100ರಲ್ಲಿ 100 ಅಂಕಗಳನ್ನು ಪಡೆದು ಅಪೂರ್ವ ಪ್ರತಿಭೆಯನ್ನು ಮೆರೆದಿದ್ದಾರೆ. ಈ ಸಾಧನೆಯೊಂದಿಗೆ ಅವರು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಗಳಿಸಿದ್ದಾರೆ.
ಈ ಸಾಧನೆಗೆ ಅಮೃತ ಭಾರತೀ ಟ್ರಸ್ಟ್ ಅಧ್ಯಕ್ಷರಾದ ಪಾಂಡುರಂಗ ರಮಣ ನಾಯಕ್ ಹಾಗೂ ಸಂಸ್ಥೆಯ ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ನವ್ಯಶ್ರೀ ಅವರ ಈ ಸಾಧನೆ ಸಂಸ್ಥೆಗೆ ಹೆಮ್ಮೆ ತಂದುಕೊಟ್ಟಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.

