ಕಾಪು: ನರೇಗಾ ನೌಕರರ ವೇತನ ವಿಳಂಬ, ಆರೋಗ್ಯ ವಿಮೆ ಹಾಗೂ ಭದ್ರತೆ ಸೇರಿ ನ್ಯಾಯಯುತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರದ ಗಮನ ಸೆಳೆಯಲು ರಾಜ್ಯಾದ್ಯಂತ ಜು. 7ರಿಂದ ಅಸಹಕಾರ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಘಟಕದ ವತಿಯಿಂದ ಮನವಿಯನ್ನು ನೀಡಲಾಯಿತು.
ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ , ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೋಡ್ಗಿ , ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿ ಹೊಳೆ ರವರಿಗೆ ನರೇಗಾ ಯೋಜನೆಯ ನೌಕರರಿಗೆ 6 ತಿಂಗಳ ವೇತನ ಪಾವತಿಯಾಗದೆ ಇರುವ ಬಗ್ಗೆ ಹಾಗೂ ಅಸಹಕಾರ ಚಳುವಳಿಯ ಬಗ್ಗೆ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಘಟಕದ ವತಿಯಿಂದ ಮನವಿಯನ್ನು ನೀಡಲಾಯಿತು.