ಉಡುಪಿ : ರಸ್ತೆ ಬದಿಯ ಕಾಂಪೌಂಡ್‌ಗೆ ಸ್ಕೂಟರ್ ಡಿಕ್ಕಿ – ತಾಯಿ ಮೃತ್ಯು, ಮಗನಿಗೆ ಗಂಭೀರ ಗಾಯ

0
113

ಉಡುಪಿ : ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡಿಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರೆ ತಾಯಿ ಮೃತಪಟ್ಟು ಸವಾರ ಮಗ ತೀವ್ರವಾಗಿ ಗಾಯಗೊಂಡ ಘಟನೆ ನಿಟ್ಟೂರು ಸಮೀಪ ಸಂಭವಿಸಿದೆ.

ಮೃತರನ್ನು ಕಟಪಾಡಿ ಮೂಲದ ಹೆಲನ್ ಸೋನ್ಸ್ (50) ಎಂದು ಗುರುತಿಸಲಾಗಿದ್ದು,ಇವರ ಮಗ ಸವಾರ ಶರ್ವಿನ್ (20 )ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ ಮಗ ಹೋಗುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಿಟ್ಟೂರು ಬಬ್ಬು ಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಹ ಸವಾರೆ ಹೆಲೆನ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here