ಉಡುಪಿ : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ರವಿವಾರ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಕುಸಿದು ಬಿದ್ದ ಎಸ್ಐ ಅವರನ್ನು ಪಕ್ಕದ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕತ್ಸೆ ಫಲಕರಿಯಾಗದೆ ನಾಸಿರ್ ಹುಸೇನ್ ನಿಧನರಾಗಿದ್ದಾರೆ.

