Sunday, July 14, 2024
Homeಉಡುಪಿಉಡುಪಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಂದಾಯ ಇಲಾಖೆ ಹಾಗೂ ತಹಸೀಲ್ದಾರರ ಕಛೇರಿ ಉಡುಪಿ ವತಿಯಿಂದ ಇಂದು ಜೂ. 28 ರಂದು ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಆಯೋಜಿಸಲಾದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ ಅರುಣ್ ಕುಮಾರ್, ಉಡುಪಿ ನಗರ ಸಭೆಯ ಪೌರಾಯುಕ್ತರಾದ ರಾಯಪ್ಪ, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಹಾಗೂ ಉಡುಪಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular