ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ದಿನಾಂಕ 03-12-2025 ರಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ವೈದ್ಯಕೀಯ ಪ್ರಕರಣದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಕೂಡಲೇ ಅನುಮೋದನೆ ನೀಡುವ ಬಗ್ಗೆ ಅರಣ್ಯ ಮತ್ತು ಕಂದಾಯ ಇಲಾಖೆ 94/C, 94/CC ಹಕ್ಕುಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು ಹಾಗೂ ಡೀಮ್ಡ್ ಫಾರೆಸ್ಟ್ ಇರುವ ಸ್ಥಳದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿ ಕಂದಾಯ ಭೂಮಿ ಹಸ್ತಾಂತರಿಸಲು ಕ್ರಮವಹಿಸಬೇಕು. ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದಲ್ಲಿ ಏಕ ನಿವೇಶನ / ಬಹು ನಿವೇಶನ ನಕ್ಷೆ ಅನುಮೋದನೆ ನೀಡುವಲ್ಲಿ ಕಡತಗಳನ್ನು ವಿಳಂಬ ಮಾಡದೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಡತ ವಿಲೇವಾರಿ ಮಾಡುವಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪ್ರಯತ್ನಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ರಶ್ಮಿ, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ತಹಶೀಲ್ದಾರರಾದ ಗುರುರಾಜ್ ಹಾಗೂ ಉಡುಪಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

