ಉಡುಪಿ: ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಖಿಲ ಭಾರತ ತುಳು ಒಕ್ಕೂಟದ ಸಹಕಾರದೊಂದಿಗೆ ಆಟಿಡೊಂಜಿ ದಿನ ಕಾರ್ಯಕ್ರಮವು ಆ.1 0ರಂದು ಬೆಳಿಗ್ಗೆ 9-30 ರಿಂದ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 11-00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಪರಿಷತ್ ಸಭಾಧ್ಯಕ್ಷರಾಗಿರುವ ಯು.ಟಿ. ಖಾದರ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾಗಿರುವ ಯೋಗೀಶ್ ಶೆಟ್ಟಿ ಜೆಪ್ಪು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9-30 ರಿಂದ ತುಳುನಾಡ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.