Sunday, January 19, 2025
Homeಅಪಘಾತಉಡುಪಿ : ಕೊಳೆತ ಮತ್ತು ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ‌ ಪತ್ತೆ

ಉಡುಪಿ : ಕೊಳೆತ ಮತ್ತು ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ‌ ಪತ್ತೆ

ಉಡುಪಿ: ಮಣಿಪಾಲ ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಭಾಗದ ಹಾಡಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ‌ ಪತ್ತೆಯಾದ ಘಟನೆ ಶುಕ್ರವಾರ ರಾತ್ರಿ ಕಂಡುಬಂದಿದೆ.

ವ್ಯಕ್ತಿ ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ.ಮೃತದೇಹ ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದೆ.

ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ನೆರವಾದರು.

RELATED ARTICLES
- Advertisment -
Google search engine

Most Popular