ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಶ್ರಯದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿರುವ 5ನೇ ವರ್ಷದ ‘ಉಡುಪಿ ಉಚ್ಚಿಲ ದಸರಾ’ ಮಹೋತ್ಸವದ ಪೂರ್ವಭಾವಿ ಸಭೆಯು ಆಗಸ್ಟ್ 8ರಂದು ಅಪರಾಹ್ನ 3.30 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಲಿದೆ.
ಈ ವರ್ಷದ ಪಂಚಮ ವರ್ಷದ ‘ಉಡುಪಿ ಉಚ್ಚಿಲ ದಸರಾ’ ಮಹೋತ್ಸವವು ಅಕ್ಟೋಬರ್ 11ರಿಂದ 21ರವರೆಗೆ 11 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದ್ದು, ಮಹೋತ್ಸವದ ರೂಪುರೇಷೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸಮಿತಿಗಳ ಜವಾಬ್ದಾರಿಗಳು, ವ್ಯವಸ್ಥಾಪನಾ ಸಿದ್ಧತೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಯಲಿದೆ.
ಸಭೆಗೆ ದಸರಾ ಉತ್ಸವ ಸಮಿತಿಯ ಎಲ್ಲಾ ಸದಸ್ಯರು, ಭಕ್ತರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳು, ಮಹಿಳಾ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹೋತ್ಸವದ ಯಶಸ್ಸಿಗೆ ಸಹಕರಿಸುವಂತೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ, ಉಡುಪಿ ಉಚ್ಚಿಲ ದಸರಾ ಉತ್ಸವ ಸಮಿತಿ ಹಾಗೂ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.

