ಉಡುಪಿ : ಬಸ್ಸಿನಡಿಗೆ ಬಿದ್ದು ಮಹಿಳೆ ಸಾವು

0
39

ಉಡುಪಿ : ಉಡುಪಿಯ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾರೆ.

ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬಸ್ಸಿನಡಿಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮೃತ ಮಹಿಳೆಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಅಪಘಾತದ ನಿಖರ ಕಾರಣವೂ ಸ್ಪಷ್ಟವಾಗಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.

ಬಸ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.