ಉಡುಪಿ : ಮಂಗಳೂರು ವಿವಿ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾಟವನ್ನು ಉಡುಪಿ ಶ್ರೀ ಅದಮಾರು ಮಠಾಧೀಶರೂ, ಬೆಂಗಳೂರಿನ ಯುಎಸ್ಎಎಂಇಸಿ ಅಧ್ಯಕ್ಷರೂ ಆಗಿರುವ ಪರಮಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಉಡುಪಿ ಶ್ರೀ ಅದಮಾರು ಮಠದ ಹಿರಿಯ ಯತಿಗಳಾಗಿರುವ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಅದಮಾರು ಮಠ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಎ.ಪಿ.ಭಟ್, ಪೂರ್ಣಪ್ರಜ್ಞ ಕಾಲೇಜಿನ ಗೌರವ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್, ಕೋಶಾಧಿಕಾರಿ ಸಿ.ಎ. ಪ್ರಶಾಂತ್ ಹೊಳ್ಳ, ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಮಂಗಳೂರು ವಿವಿ ಅಬ್ಸರ್ವರ್ ಡಾ. ರಮೇಶ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮು ಎಲ್. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಶ್ರೀ ಸುಕುಮಾರ್ ಉಪಸ್ಥಿತರಿದ್ದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ರಮೇಶ್ ಟಿ. ಎಸ್ ಸ್ವಾಗತಿಸಿದರು, ವಿದ್ಯಾರ್ಥಿನಿ ಸಿಂಧು ಹೆಗಡೆ ಪ್ರಾರ್ಥಿಸಿದರು, ಸಹಾಯಕ ಪ್ರಾಧ್ಯಾಪಕ ಮುರಳಿ ನಿರೂಪಿಸಿದರು, ವಾಣಿಜ್ಯಶಾಸ್ತ್ರ ವಿಭಾಗದ ಜಯಲಕ್ಷ್ಮಿ ವಂದಿಸಿದರು.
ಮಂಗಳೂರು ಹಾಗೂ ಉಡುಪಿ ವಲಯದ ಸುಮಾರು 29 ಮಹಿಳಾ ಕಬಡ್ಡಿ ತಂಡಗಳು ಭಾಗವಹಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ , ಸರಕಾರಿ ಪದವಿ ಪೂರ್ವ ಕಾಲೇಜು , ಪುತ್ತೂರು , ವಿವೇಕಾನಂದ ಕಾಲೇಜು ಪುತ್ತೂರು , ಪೂರ್ಣಪ್ರಜ್ಞ ಕಾಲೇಜು ಉಡುಪಿ ಕ್ವಾರ್ಟರ್ ಫೈನಲ್ಸ್ ಗೆ ತಲುಪಿದೆ . ಈ ನಾಲ್ಕು ತಂಡಗಳು ಕಳೆದ ವರ್ಷದಲ್ಲಿ ಅರ್ಹಗೊಂಡ ಎಸ್ ಡಿ ಎಂ ಕಾಲೇಜು ಉಜಿರೆ, ಆಳ್ವಾಸ್ ಕಾಲೇಜು ಮೂಡಬಿದ್ರೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು, ಡಾ ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ತಂಡಗಳೊಂದಿಗೆ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೆಣೆಸಲಿವೆ.

