Tuesday, December 3, 2024
Homeಉಡುಪಿಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣರ ಬೆಂಬಲ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣರ ಬೆಂಬಲ ಕೋರಿದರಾ?

ಉಡುಪಿ: ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಇತ್ತೀಚೆಗೆ ಜೋರಾಗಿದೆ. ಪಕ್ಷಕ್ಕಾಗಿ ಹೊಸ ಕಾರ್ಯಕರ್ತರನ್ನು ಜೋಡಿಸುವ ನಿಟ್ಟಿನಲ್ಲಿ ಎರಡು ಪಕ್ಷದ ಕಾರ್ಯಕರ್ತರುಗಳೂ ಹೊಸ ಸದಸ್ಯರನ್ನು ನೋಂದಾಯಿಸುವಲ್ಲಿ ಬೂತ್ ಮಟ್ಟದ ಅಭಿಯಾನ ನಡೆಸುತ್ತಿವೆ. ಈ ಸಂದರ್ಭದಲ್ಲಿ ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಬಿಜೆಪಿ ಶಾಸಕರ ಹಾಗೂ ಕಾರ್ಯಕರ್ತರ ಬೆಂಬಲ ಕೋರಿದ್ದಾರೆನ್ನಲಾದ ಫೋಟೋಗಳು ಹಾಗೂ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪಕ್ಷಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.
ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಐದು ಮಂದಿ ನಾಮಪತ್ರ ಸಲ್ಲಿಸಿದ್ದು, ಪೈಪೋಟಿಯಿದೆ. ಚುನಾವಣೆ ಸೆ. 20ರಂದು ನಡೆಯಲಿದ್ದು, ಅದಕ್ಕೂ ಮುನ್ನ ನಾಲ್ಕು ದಿನ ಬಾಕಿ ಇರುವಾಗಲೇ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಅವರ ಕಚೇರಿಯಲ್ಲಿ ಭೇಟಿಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೊಳಗಾಗಿದ್ದು, ಕಾಂಗ್ರೆಸ್​ಗೆ ಮುಖಭಂಗವಾಗಿದೆ.
ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣರನ್ನು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರನ್ನು ಜೊತೆಗೆ ಕರೆದುಕೊಂಡು ಹೋಗಿ ಯುವ ಕಾಂಗ್ರೆಸ್ ಚುನಾವಣೆಗೆ ಬೆಂಬಲ ಕೋರಿದ್ದರೆನ್ನಲಾದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಕಾಂಗ್ರೆಸ್ ಪಾಳಯದಲ್ಲಿ ವಿಪರೀತ ಆಕ್ರೋಶ ಭುಗಿಲೆದ್ದಿದೆ.

RELATED ARTICLES
- Advertisment -
Google search engine

Most Popular