ಉಜಿರೆ: ವಿದ್ಯಾರ್ಥಿನಿಯರಿಗೆ ಉಚಿತ ಚರ್ಮರೋಗ ತಪಾಸಣೆ-ಜಾಗೃತಿ ಶಿಬಿರ

0
17

ಉಜಿರೆ: ಧ‍ರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಸಹಯೋಗದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿ ಇವರು ಮೈತ್ರೆ ಹಾಸ್ಟೆಲ್ ಪದವಿ ಪೂರ್ವ ವಿದ್ಯಾರ್ಥಿನಿಯರಿಗೆ ಉಚಿತ ಚರ್ಮರೋಗ ತಪಾಸಣೆ ಮತ್ತು ಜಾಗೃತಿ ಶಿಬಿರವನ್ನು 2 ದಿನ ನಡೆಸಿಕೊಟ್ಟರು.


ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ಶರೀರದ ಆರೋಗ್ಯ ಕಾಪಾಡುವಲ್ಲಿ ಚರ್ಮದ ಪಾತ್ರ, ಹಾನಿಕಾರಕ ಪರಿಸರದ ಅಂಶಗಳಿAದ ನಮ್ಮ ಚರ್ಮವನ್ನು ರಕ್ಷಿಸಿಕೊಳ್ಳಲು ಮಾಡಬೇಕಾದ ಚರ್ಮದ ಆರೈಕೆ. ಹದಿಹರೆಯದಲ್ಲಿ ಮೊಡವೆಗಳನ್ನು ತಡೆಗಟ್ಟುವ ವಿಧಾನ ಇತ್ಯಾದಿ ವಿಷಯಗಳನ್ನು ತಿಳಿಸಿಕೊಟ್ಟರು. ಸುಮಾರು ೧೨೦ ವಿದ್ಯಾರ್ಥಿನಿಯರಿಗೆ ತಪಾಸಣೆ ನಡೆಸಿ, ಸೂಕ್ತ ಸಲಹೆ ನೀಡಿದರು.

LEAVE A REPLY

Please enter your comment!
Please enter your name here