ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಉಜಿರೆ ಎಸ್ .ಡಿ.ಎಂ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದಿದೆ . ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದೆ.
ಫೈನಲ್ ಪಂದ್ಯಾಟದಲ್ಲಿ ವಿಜಯಪುರ ಜಿಲ್ಲೆಯ ತಂಡವನ್ನು ಎದುರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್ .ಡಿ.ಎಂ ತಂಡ, ವಿಜಯಪುರ ವಿರುದ್ದ 38-26 ಅಂಕಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ , 2025-26ನೇ ಸಾಲಿನ ರಾಜ್ಯ ಮಟ್ಟವದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕಬಡ್ಡಿ ಚಾಂಪಿಯನ್ ಪಟ್ಟವನ್ನ ತನ್ನದ್ದಾಗಿಸಿತು.
ಈ ಸಂದರ್ಭದಲ್ಲಿ ಎಸ್ .ಡಿ.ಎಂ ಕಬಡ್ಡಿ ತಂಡದ ತರಬೇತುದಾರ ಕೃಷ್ಣಾನಂದ ರಾವ್ ಮತ್ತು ತಂಡದ ವ್ಯವಸ್ಠಾಪಕ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ ಪೂಂಜ ಇದ್ದರು .
.ವರದಿ ರಾಯಿ ರಾಜ ಕುಮಾರ