ಉಡುಪಿ: ಕಳೆದ ಕೆಲವು ದಿನಗಳಿಂದ ಮಲ್ಪೆ ಮತ್ತು ಉಡುಪಿ ಪರಿಸರದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಅಧಿಕೃತ ಪರವಾನಿಗೆಯನ್ನು ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ವೈಟ್ ಬೋರ್ಡ್ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಮಲ್ಪೆ ಪೊಲೀಸರು 18 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ತೆಂಕನಿಡಿಯುರು ನಿವಾಸಿ ಅರ್ ರಶೀದ್ ವಿರುದ್ಧ ಪ್ರಕರಣ ದಾಖಲಾಗಿದೆ. ತೆಂಕನಿಡಿಯೂರು ಗ್ರಾಮದ ಬೆಳ್ಕಲೆ ಹಿರಣ್ಯಧಾಮ ಲೇಔಟ್ ಮನೆಯಲ್ಲಿ ನಿಲ್ಲಿಸಿರುವ ಕಾರುಗಳ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ 18 ವಿವಿಧ ಮಾದರಿಯ ವೈಟ್ ಬೋರ್ಡ್ ಕಾರುಗಳು ಕಂಡು ಬಂದಿರುತ್ತದೆ. ಈ ಬಗ್ಗೆ ವಿಚಾರಿಸಿದಾಗ, ತಾನು ಈ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಂಬಂಧಪಟ್ಟ ಪ್ರಾಧಿಕಾರದಿಂದ ಪರ್ಮಿಟ್ ಇರುವುದಿಲ್ಲ ಎಂದು ತಿಳಿಸಿದ್ದಾನೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.