Sunday, July 14, 2024
Homeಅಪರಾಧದಾಖಲೆಗಳಿಲ್ಲದ ₹7.98 ಲಕ್ಷ ವಶ

ದಾಖಲೆಗಳಿಲ್ಲದ ₹7.98 ಲಕ್ಷ ವಶ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ. ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್‌ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ ಉಪ ಖಜಾನೆಯಲ್ಲಿ ಇರಿಸಲಾಗಿದೆ ಎಂದು ಖಾನಾಪುರ ಸಹಾಯಕ ಚುನಾವಣಾಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular