ಕೇಂದ್ರ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ರವರೊಂದಿಗೆ ಉಡುಪಿ ಶ್ರೀ ಕೃಷ್ಣಮಠ ಹಾಗೂ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಾಯಿತು.

ಪರ್ಯಾಯ ಶ್ರೀ ಶೀರೂರು ಮಠದ ಪರಮ ಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಮಂತ್ರಾಕ್ಷತೆ ನೀಡಿ ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ , ಯಶ್ ಪಾಲ್ ಸುವರ್ಣ ಹಾಗೂ ಪಕ್ಷದ ಜಿಲ್ಲಾ ಪದಾಧಿಕಾರಿ ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

